ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವಹೇಳನ: ಆರೋಪಿ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು
Update: 2020-07-18 17:10 IST
ಉಡುಪಿ, ಜು.18: ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಆರೋಪಿ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವ ಕುಮಾರ್ ಎಸ್.ಎಂ. ಹೆಸರಿನ ವ್ಯಕ್ತಿ, ಅಂಬೇಡ್ಕರ್‌ರನ್ನು ಅವಾಚ್ಯವಾಗಿ ನಿಂದಿಸಿ, ವಾಟ್ಸಾಪ್ ಮೂಲಕ ಹರಿಬಿಟ್ಟಿದ್ದಾನೆ. ಈ ಮೂಲಕ ದೇಶದ ಸಂವಿಧಾನಕ್ಕೆ ಅಪಮಾನ ಮಾಡಿರುವ ರಾಷ್ಟ್ರದ್ರೋಹಿ ಶಿವಕುಮಾರ್‌ರನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಸಮತಾ ಸೈನಿಕ ದಳ ಉಡುಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ದೂರಿನಲ್ಲಿ ತಿಳಿಸಿದ್ದಾರೆ.