ಕೊರೋನ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿರುವುದಕ್ಕೆ ಹೆಮ್ಮೆಯಿದೆ: ಹಿರಿಯ ಪೊಲೀಸ್ ಅಧಿಕಾರಿ ನಿಂಬಾಳ್ಕರ್
Update: 2020-07-19 18:06 IST
ಬೆಂಗಳೂರು, ಜು.19: ಕೊರೋನ ಸೋಂಕಿನ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿರುವುದಕ್ಕೆ ಹೆಮ್ಮೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನುಡಿದಿದ್ದಾರೆ.
ಈ ಕುರಿತು ರವಿವಾರ ಟ್ವಿಟ್ ಮಾಡಿರುವ ಅವರು, ಬೆಂಗಳೂರು ಪೊಲೀಸರು ನಗರದ ರಸ್ತೆಗಳಲ್ಲಿ ಭಕ್ತಿಯಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರತರಾಗಿದ್ದಾರೆ. ಕುಟುಂಬ, ಮಕ್ಕಳು ಮತ್ತು ಜೀವನವನ್ನು ಮರೆತು ಈ ಅದ್ಭುತ ಹೋರಾಟದ ಭಾಗವಾಗಿರುವುದಕ್ಕೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕೆಲಸ ಮಾಡುವ ವೇಳೆ, ಆರೋಪಿಗಳನ್ನು ಬಂಧಿಸುವಾಗ ಸೇರಿದಂತೆ ವಿವಿಧ ರೀತಿಯಲ್ಲಿ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ. ಒಟ್ಟು 746 ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದ್ದು, ಈ ಪೈಕಿ 493 ಮಂದಿ ಮನೆಗೆ ತೆರಳಿದ್ದಾರೆ. ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದ 807 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆಎಂದು ಅವರು ಹೇಳಿದ್ದಾರೆ.