ಕೆಎಂಸಿಯಲ್ಲಿ ವೀಡಿಯೋ ಸಮಾಲೋಚನೆ ಸೇವಾ ಸೌಲಭ್ಯ
ಮಣಿಪಾಲ, ಜು.19: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ವೀಡಿಯೋ ಸಮಾಲೋಚನೆ ಸೇವಾ ಸೌಲಭ್ಯವನ್ನು ಜು.20 ರಿಂದ ಆರಂಭಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧಿೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
ಕೊರೋನ ಸಂಬಂಧ ಹಲವು ನಿರ್ಬಂಧಗಳಿರುವುದರಿಂದ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರು ಸಮಾ ಲೋಚನೆಯಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಡಿಯೋ ಸೇವೆ ಯನ್ನು ಆರಂಭಿಸಲು ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಸೇವೆಯಡಿಯಲ್ಲಿ ಜನರು ತಮ್ಮ ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ದೂರವಾಣಿ ಮೂಲಕ ಅಥವಾ ವೀಡಿಯೋ ಕರೆ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗದ ವೈದ್ಯರನ್ನು ಸಂಪರ್ಕಿಸಬಹುದು. ಸಂಪರ್ಕಿಸಲು 080 47192235ಗೆ ಕರೆ ಮಾಡಬೇಕು.ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ 24ಗಿ7 ಕಾರ್ಯನಿರ್ವಹಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.