ಕಲಬುರಗಿ ಜಿಲ್ಲೆಯಲ್ಲಿ ಜುಲೈ 27ರವರೆಗೆ ಲಾಕ್​ಡೌನ್ ವಿಸ್ತರಣೆ

Update: 2020-07-19 16:25 GMT
 ಜಿಲ್ಲಾಧಿಕಾರಿ ಬಿ.‌ಶರತ್

ಕಲಬುರಗಿ, ಜು.19: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕಲಬುರಗಿಯಲ್ಲಿ ಈಗಾಗಲೇ ಘೋಷಿಸಲಾಗಿರುವ ಲಾಕ್​ಡೌನ್ ಅನ್ನು ಜು.27ರವರೆಗೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಬಿ.‌ಶರತ್ ಆದೇಶ ಹೊರಡಿಸಿದ್ದಾರೆ.

ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಜು.14ರಿಂದ ಜು.20ರವರೆಗೆ ಲಾಕ್​ಡೌನ್ ಜಾರಿ ಮಾಡಲಾಗಿತ್ತು. ಇದನ್ನು ಜು.27ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜನತೆಯ ಆರೋಗ್ಯದ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಈ ಮುಂಚೆ ಅನುಮತಿಸಿದ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆದಿರತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News