ವಿದ್ಯಾರ್ಥಿನಿಯ ಅತ್ಯಾಚಾರ, ಹತ್ಯೆ ಆರೋಪ: ಜನರಿಂದ ಪ್ರತಿಭಟನೆ; 3 ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ

Update: 2020-07-19 19:14 GMT

ಕೊಲ್ಕತ್ತಾ: ವಿದ್ಯಾರ್ಥಿನಿಯೊಬ್ಬಳ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈಯಲಾಗಿದೆ ಎಂದು ಆರೋಪಿಸಿ ಜನರು ಕೊಲ್ಕತ್ತಾವನ್ನು ಸಂಪರ್ಕಿಸುವ ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದರು.

ಕೊಲ್ಕತ್ತಾದಿಂದ 500 ಕಿ.ಮೀ. ದೂರದಲ್ಲಿರುವ ಚೋಪ್ರಾದಲ್ಲಿ ಪ್ರತಿಭಟನಕಾರರು ಸುಮಾರು 2 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಪೊಲೀಸರು ನಿಯಂತ್ರಿಸಲು ಯತ್ನಿಸಿದರೂ ಪ್ರತಿಭಟನಕಾರರು ಪ್ರತಿರೋಧ ತೋರಿದರು. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿದರು.

ಘಟನೆಯಲ್ಲಿ ಮೂರು ಬಸ್ ಗಳು ಮತ್ತು ಪೊಲೀಸ್ ವಾಹನಗಳಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿದರು.

ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿ 10ನೆ ತರಗತಿ ಉತ್ತೀರ್ಣಳಾಗಿದ್ದಳು. ಕಳೆದ ರಾತ್ರಿ ಆಕೆಯ ಕಾಣೆಯಾದ ನಂತರ ಕುಟುಂಬದವರು ಹುಡುಕಾಟ ನಡೆಸಿದ್ದರು. ಕೊನೆಗೆ ಬಾಲಕಿಯ ಮೃತದೇಹ ಮರವೊಂದರ ಕೆಳಗ ಪತ್ತೆಯಾಗಿತ್ತು. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ವಿಷ ಸೇವನೆಯಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಬಂದಿದೆ ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಲೈಂಗಿಕ ದೌರ್ಜನ್ಯ ನಡೆದಿರುವುದು ಕಂಡುಬಂದಿಲ್ಲ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News