ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಅಬ್ಬಾಸ್ ನಿಧನ
Update: 2020-07-20 17:05 IST
ಬಂಟ್ವಾಳ, ಜು.20: ದ.ಕ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ರಾಜಕೀಯ, ಧಾರ್ಮಿಕ ಮುಂದಾಳು ಎಸ್.ಅಬ್ಬಾಸ್ (67) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನರಾಗಿದ್ದಾರೆ.
ಅವರು ಜಿ.ಪಂ. ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರು ಸಜೀಪನಡು ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್, ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜಕೀಯ, ಧಾರ್ಮಿಕ ಮುಖಂಡರ ಜೊತೆ ಒಟನಾಡ ಇಟ್ಟುಕೊಂಡಿದ್ದರು.
ಇವರು ಇಬ್ಬರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.