ಕೊರೋನ ಬಗ್ಗೆ ಭಯ ಬೇಡ: ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಜನಾರ್ದನ ಪೂಜಾರಿ
Update: 2020-07-20 17:33 IST
ಮಂಗಳೂರು, ಜು.20: ಕೊರೋನ ಬಗ್ಗೆ ಯಾರೂ ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯ ಬೆಳೆಸಿಕೊಂಡು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ ಜಾಗರೂಕತೆ ವಹಿಸಿ ಎಂದು ಕೇಂದ್ರದ ಮಾಜಿ ಸಚಿ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.
ಕೊರೋನ ಸೋಂಕಿಗೊಳಗಾಗಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಅವರು ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಕರೆ ನೀಡಿರುವ ಅವರು, ತಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ತಮಗೆ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ ಹಾಗೂ ಆಸ್ಪತ್ರೆಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.