×
Ad

ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

Update: 2020-07-20 17:51 IST

ಮೈಸೂರು, ಜು.20: ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಡ್ರೋನ್ ಪ್ರತಾಪ್ ನನ್ನು ಮೈಸೂರಿನಲ್ಲಿ ಬೆಂಗಳೂರಿನ ತಲಘಟ್ಟ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜು.15ರಂದು ಹೈದರಾಬಾದ್‍ನಿಂದ ಬೆಂಗಳೂರಿಗೆ ಆಗಮಿಸಿದ್ದ ಡ್ರೋನ್ ಪ್ರತಾಪ್ ನಗರದ ಅಪಾರ್ಟ್ ಮೆಂಟ್‍ವೊಂದರಲ್ಲಿ ವಾಸವಿದ್ದು, ಆತನನ್ನು ಬಿಬಿಎಂಪಿ 14 ದಿನ ಹೋಂ ಕ್ವಾರಂಟೈನ್‍ನಲ್ಲಿರುವಂತೆ ಸೂಚಿಸಿತ್ತು. ಆದರೆ, ಕ್ವಾರಂಟೈನ್ ಅವಧಿಯ ಮೂರನೇ ದಿನವೇ ನಿಯಮ ಉಲ್ಲಂಘನೆ ಮಾಡಿ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ. ಈ ಹಿನ್ನೆಲೆಯಲ್ಲಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಬಳಿಕ ಈತ ಯಾರ ಸಂಪರ್ಕಕ್ಕೂ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ಇಂದು ಆತ ಮೈಸೂರಿನಲ್ಲಿ ಇರುವುದನ್ನು ಪತ್ತೆ ಹಚ್ಚಿದ ಪೊಲೀಸರು ಅಲ್ಲಿಗೆ ತೆರಳಿ ವಶಕ್ಕೆ ಪಡೆದಿದ್ದಾರೆ.

Read this news in English by clicking here

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News