×
Ad

ಬೆಂಕಿ ಹಚ್ಚಿ ಪತ್ನಿಯ ಕೊಲೆ ಪ್ರಕರಣ: ಆರೋಪಿ ಪತಿ ಬಂಧನ

Update: 2020-07-20 23:40 IST

ಬೆಂಗಳೂರು, ಜು.20: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಲೆ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊರ್ವನನ್ನು ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಅನ್ನು ಸಿದ್ದರಾಜು ಎಂದು ಪೊಲೀಸರು ತಿಳಿಸಿದ್ದಾರೆ.

ಜೂ.13 ರಂದು ನೆಲಮಂಗಲದ ಯರಮಂಚನಹಳ್ಳಿಯ ಗಂಗಮ್ಮ ಅವರನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಪತಿ ಸಿದ್ದರಾಜು ಪರಾರಿಯಾಗಿದ್ದ. ಸ್ಥಳೀಯರು ಗಂಗಮ್ಮ ಅನ್ನು ರಕ್ಷಿಸಿ  ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದರಾದರೂ ಚಿಕಿತ್ಸೆ ಫಲಕಾರಿ ಯಾಗದೆ ಜೂ.17ರಂದು ಮೃತಪಟ್ಟಿದ್ದರು ಎನ್ನಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿ ಸಿದ್ದರಾಜು ಅನ್ನು ಬಂಧಿಸಿ ತನಿಖೆ ನಡೆಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News