×
Ad

ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್ ನಿಧನ

Update: 2020-07-21 09:22 IST

ಲಕ್ನೋ, ಜು.21: ಮಧ್ಯಪ್ರದೇಶದ ರಾಜ್ಯಪಾಲ ಲಾಲ್‌ಜಿ ಟಂಡನ್ ಮಂಗಳವಾರ ಮುಂಜಾನೆ ನಿಧನರಾದರು.
ಅವರಿಗೆ 85 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರು ಜೂನ್ 11ರಿಂದ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಉಸಿರಾಟದ ತೊಂದರೆ, ಮೂತ್ರ ಸಮಸ್ಯೆ ಮತ್ತು ಜ್ವರದ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರ ಪುತ್ರ ಅಶುತೋಶ್ ಟಂಡನ್, ಲಾಲ್‌ಜಿಯವರ ನಿಧನವನ್ನು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಮುಂಜಾನೆ 5:30ಕ್ಕೆ ಲಾಲ್‌ಜಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಲಕ್ನೋದ ಗುಲ್ಲಾಲ ಘಾಟ್‌ನಲ್ಲಿ ಇಂದು ಸಂಜೆ 4:30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News