ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ; ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಕೋಟ
ಮಂಗಳೂರು, ಜು.21: ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಅನ್ನು ವಿಸ್ತರಿಸುವ ಕುರಿತಂತೆ ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯ ವಿಧಿಸಿರುವ ಒಂದು ವಾರಗಳ ಲಾಕ್‌ಡೌನ್ ಜು.22ರಂದು ಕೊನೆಗೊಳ್ಳಲಿದೆ. ಆದರೆ ಲಾಕ್‌ಡೌನ್‌ನ್ನು 15 ದಿನಗಳಿಗೆ ವಿಸ್ತರಿಸುವಂತೆ ಸಾರ್ವಜನಿಕರಿಂದ ಬೇಡಿಕೆಗಳು ಬರುತ್ತಿವೆ. ಇನ್ನೊಂದೆಡೆ ಲಾಕ್‌ಡೌನ್ ಒಂದೇ ಪರಿಹಾರ ಅಲ್ಲ ಎಂಬ ಅನಿಸಿಕೆಯೂ ವ್ಯಕ್ತವಾಗುತ್ತಿದೆ. ಆದ್ದರಿಂದ ಲಾಕ್‌ಡೌನ್ ಕುರಿತು ಜು.22ರಂದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಇವತ್ತು ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಲಾಕ್‌ಡೌನ್ ವಿಸ್ತರಿಸಬೇಕೇ ಅನ್ನೋ ಕುರಿತು ಚರ್ಚಿಸಲಾಗುವುದು. ಮುಖ್ಯಮಂತ್ರಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ.