ಮಹಿಳಾ ಸಿಬ್ಬಂದಿಗೆ ಕೊರೋನ ಪಾಸಿಟಿವ್: ಉಡುಪಿ ಎಸ್ಪಿ ಕಚೇರಿ ಸ್ಯಾನಿಟೈಸ್
Update: 2020-07-21 16:18 IST
ಉಡುಪಿ, ಜು.21: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿನ ಮಹಿಳಾ ಸಿಬ್ಬಂದಿಗೆ ಇಂದು ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಕಚೇರಿಯ ವಿಭಾಗವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಜು.17ರಂದು ಸಂಗ್ರಹಿಸಲಾಗಿತ್ತು. ಇದೀಗ ಅವರ ವರದಿ ಪಾಸಿಟಿವ್ ಬಂದಿದೆ. ಇವರ ಸಂಪರ್ಕ ದಲ್ಲಿದ್ದ ಇತರ ಸಿಬ್ಬಂದಿಗಳನ್ನು ಹೋಮ್ ಕ್ವಾರಂಟೇನ್‌ನಲ್ಲಿ ಇರಿಸಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಪಾಸಿಟಿವ್ ಬಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಾರ್ಗಸೂಚಿಯಂತೆ ಇಡೀ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಆದರೆ ಎಸ್ಪಿ ಕಚೇರಿಯು ಅಗತ್ಯ ಸಿಬ್ಬಂದಿಗಳೊಂದಿಗೆ ಎಂದಿನಂತೆ ಕಾರ್ಯ ನಿರ್ವಹಿಸುತ್ತದೆ. ಕಚೇರಿಯ ಸ್ಯಾನಿಟೈಸ್ ಕೆಲಸ ಮಾತ್ರ ನಡೆಯುತ್ತಿದೆ ಹೊರತು ಕಚೇರಿಯನ್ನು ಬಂದ್ ಮಾಡಲಾಗುವುದಿಲ್ಲ ಎಂದು ಎಸ್ಪಿ ವಿಷ್ಣುವರ್ಧನ್ ಸ್ಪಷ್ಟಪಡಿಸಿದ್ದಾರೆ.