ಪತ್ನಿ, ಮಗನಿಗೆ ಕೊರೋನ ದೃಢ: ನೆರೆ ಮನೆಯವರ ವರ್ತನೆಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

Update: 2020-07-21 11:59 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.21: ಕುಟುಂಬ ಸದಸ್ಯರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯರು ಅಸಭ್ಯವಾಗಿ ವರ್ತಿಸಿ ಅವಮಾನಿಸಿದ್ದಾರೆಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ನಾಗರಾಜು(56) ಮೃತ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಮೃತ ನಾಗರಾಜು ಅವರ ಪುತ್ರನಿಗೆ ಸೋಂಕು ತಗುಲಿತ್ತು. ನಂತರ ಪತ್ನಿಯನ್ನು ಕೊರೋನ ಪರೀಕ್ಷೆಗೊಳಪಡಿಸಿದಾಗ, ಅವರಿಗೂ ಸೋಂಕು ತಗಲಿರುವುದು ಪತ್ತೆಯಾಗಿದ್ದರಿಂದ ಅವರು ವಾಸವಿದ್ದ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿತ್ತು. 

ಸೀಲ್‍ಡೌನ್ ವೇಳೆ ಅಕ್ಕಪಕ್ಕದ ಮನೆಯವರು ಮೃತ ನಾಗರಾಜ್ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ತೀವ್ರ ಬೇಸತ್ತ ನಾಗರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News