2020-21ನೇ ಸಾಲಿನ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2020-07-21 12:38 GMT

ಉಡುಪಿ, ಜು.21: ಉಡುಪಿಯಲ್ಲಿರುವ ಕೇಂದ್ರಿಯ ವಿದ್ಯಾಲಯದ 2020-21 ನೇ ಸಾಲಿನ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಸಂಸ್ಥೆಯಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯುವ ಬಗ್ಗೆ ಜು.17ರಿಂದ ಆಗಸ್ಟ್ 7ರವರೆಗೆ ಹಾಗೂ 2ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ಪಡೆಯುವ ಬಗ್ಗೆ ಜು.20ರಿಂದ 25ರವೆಗೆ ಅರ್ಜಿಗಳನ್ನು ಸಲ್ಲಿಸಬಹುದು.

2ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಜು.29ರ ಸಂಜೆ 4:00ಗಂಟೆಗೆ ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ತರಗತಿಗಳಿಗೆ ದಾಖಲಾತಿಯನ್ನು ಜು.30 ರಿಂದ ಆಗಸ್ಟ್ 7ರವರೆಗೆ ಮಾಡಿಕೊಳ್ಳಲಾಗುವುದು. ಕೇಂದ್ರಿಯ ವಿದ್ಯಾಲಯದ 9ನೇ ತರಗತಿಗೆ ದಾಖಲಾತಿಯನ್ನು 10ನೇ ತರಗತಿಯ ಫಲಿತಾಂಶ ಬಂದ 2 ವಾರದೊಳಗೆ ಮಾಡಿಕೊಳ್ಳಾಗುವುದು.

ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಇತರರಿಗೆ 9ನೇ ತರಗತಿಗೆ ದಾಖಲಾತಿಯನ್ನು ಕೇಂದ್ರಿಯ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿಯ ನಂತರ ಪ್ರಕಟಿಸಲಾಗುವುದು. 9ನೇ ತರಗತಿ ಒಳಗೊಂಡಂತೆ ಎಲ್ಲಾ ತರಗತಿಗಳ ದಾಖಲಾತಿಗೆ ಸೆ.15 ಕೊನೆಯ ದಿನವಾಗಿದೆ.
 
ನೊಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪಟ್ಟಿ, ಅರ್ಹ ವಿದ್ಯಾರ್ಥಿಗಳ ಪಟ್ಟಿ, ವರ್ಗವಾರು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ, ವೈಟಿಂಗ್ ಲಿಸ್ಟ್ ನಲ್ಲಿರುವವರ ವಿವರಗಳನ್ನು ಕಡ್ಡಾಯವಾಗಿ ಕೇಂದ್ರೀಯ ವಿದ್ಯಾಲಯದ ವೆಬ್ ಸೈಟಿನಲ್ಲಿ ಮತ್ತು ಶಾಲಾ ನೋಟೀಸು ಬೋರ್ಡಿನಲ್ಲಿ ಪ್ರಕಟಿಸಲಾಗುವುದು. ನೊಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪಟ್ಟಿ, ಅರ್ಹ ವಿದ್ಯಾರ್ಥಿಗಳ ಪಟ್ಟಿ, ವರ್ಗವಾರು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ, ವೈಟಿಂಗ್ ಲಿಸ್ಟ್ ನಲ್ಲಿರುವವರ ವಿವರಗಳನ್ನು ಕಡ್ಡಾಯವಾಗಿ ಕೇಂದ್ರೀಯ ವಿದ್ಯಾಲಯದ ವೆಬ್ ಸೈಟಿನಲ್ಲಿ ಮತ್ತು ಶಾಲಾ ನೋಟೀಸು ಬೋರ್ಡಿನಲ್ಲಿ ಪ್ರಕಟಿಸಲಾಗುವುದು.

ಕೇಂದ್ರಿಯ ವಿದ್ಯಾಲಯದ ತರಗತಿಗಳನ್ನು ಕೋವಿಡ್-19ರ ಪರಿಸ್ಥಿತಿಗಳಿಗ ನುಸಾರವಾಗಿ ಸೆ.15ರಂದು ಆನ್‌ಲೈನ್ ಅಥವಾ ಕೇಂದ್ರೀಯ ವಿದ್ಯಾಲಯದಲ್ಲಿ ತರಗತಿಗಳ ಮುಖಾಂತರ ಪ್ರಾರಂಭಿಸಲಾಗುವುದು. ದೇಶದಲ್ಲಿರುವ ಕೇಂದ್ರೀಯ ವಿದ್ಯಾಲಯಗಳನ್ನು ಐಸೋಲೇಶನ್ ಸೆಂಟರ್ ಅಥವಾ ಕ್ವಾರೆಂಟೈನ್ ಸೆಂಟರ್ ಗಳಾಗಿ ಬಳಸುತ್ತಿರುವುದರಿಂದ ಲಾಕ್‌ಡೌನ್ ಮುಕ್ತಾಯದ ನಂತರ ಸರಕಾರದ ಅನುಮತಿಯೊಂದಿಗೆ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News