ಬೆಂಗಳೂರು: ಕೊರೋನ ಸೋಂಕು ದೃಢಪಟ್ಟಿದ್ದ ವ್ಯಕ್ತಿ ಆತ್ಮಹತ್ಯೆ

Update: 2020-07-21 13:58 GMT

ಬೆಂಗಳೂರು, ಜು.21: ಕೊರೋನ ಸೋಂಕು ದೃಢಪಟ್ಟ ಕಾರಣದಿಂದಾಗಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮತ್ತಿಕೆರೆಯ 2 ನೇ ಮುಖ್ಯರಸ್ತೆಯ ದೇವಸಂದ್ರ ನಿವಾಸಿ 54 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ.

ಕೊರೋನ ಲಕ್ಷಣ ಕಂಡು ಬಂದ ಹಿನ್ನೆಲೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಸೋಮವಾರ ರಾತ್ರಿ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಕರೆ ಬಂದಿತ್ತು. ಬಳಿಕ ಮಧ್ಯರಾತ್ರಿ ಮನೆಯ ಮಹಡಿ ಮೇಲೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News