ಕುರುಬರ ಸಂಘಕ್ಕೆ ಹೊಸದಾಗಿ ಚುನಾವಣೆ ನಡೆಸುವ ಆದೇಶ ರದ್ದು: ಹೈಕೋರ್ಟ್

Update: 2020-07-21 15:12 GMT

ಬೆಂಗಳೂರು, ಜು.21: ಕುರುಬರ ಸಂಘಕ್ಕೆ ಹೊಸದಾಗಿ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಘದಲ್ಲಿ ನಡೆದಿರುವ ಅವ್ಯವಹಾರಗಳನ್ನು ವಿಚಾರಣೆಗೆ ಒಳಪಡಿಸುವಂತೆ ಹೈಕೋರ್ಟ್ ಸೂಚಿಸಿದೆ.

ಹೊಸದಾಗಿ ಚುನಾವಣೆ ನಡೆಸುವಂತೆ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ವಿಭಾಗೀಯ ನ್ಯಾಯಪೀಠವು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು, ಸಂಘದಲ್ಲಿ ನಡೆದಿರುವ ಅವ್ಯವಹಾರಗಳ ವಿಚಾರಣೆ ಮಾಡಬೇಕು. ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದು, ಕಾನೂನು ಪ್ರಕಾರ ಆದೇಶ ಪಾಲಿಸುವಂತೆ ಏಕಸದಸ್ಯ ನ್ಯಾಯಪೀಠಕ್ಕೆ ಸೂಚಿಸಿದೆ.

ಏನಿದು ಪ್ರಕರಣ: ಜೂ.26ರಂದು ಕುರುಬರ ಸಂಘದ ಚುನಾವಣೆ ನಡೆದಿತ್ತು. ಸಿದ್ದರಾಮಯ್ಯ ಮತ್ತು ಕೆ.ಎಸ್.ಈಶ್ವರಪ್ಪ ಬಣದ ಮಧ್ಯೆ ಪೈಪೋಟಿ ನಡೆದಿತ್ತು. ಈ ವೇಳೆ ಈಶ್ವರಪ್ಪ ಬಣ ಹೀನಾಯವಾಗಿ ಸೋಲಿಗೆ ಶರಣಾಗಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಹೊಸದಾಗಿ ಚುನಾವಣೆ ನಡೆಸಲು ಆದೇಶ ಮಾಡಿತ್ತು. ಈಗ ಆ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News