ಗುವಾಹತಿ ಜೈಲಿನಲ್ಲಿರುವ ಶರ್ಜೀಲ್ ಇಮಾಮ್‌ಗೆ ಕೊರೋನ ಪಾಸಿಟಿವ್

Update: 2020-07-22 04:14 GMT

ಗುವಾಹತಿ, ಜು.22: ಬಂಧಿತರಾಗಿ ಇಲ್ಲಿನ ಕೇಂದ್ರೀಯ ಕಾರಾಗೃಹದಲ್ಲಿರುವ ಹೋರಾಟಗಾರ ಶರ್ಜೀಲ್ ಇಮಾಮ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಅವರ ಗಂಟಲುದ್ರವ ಪರೀಕ್ಷೆಯಿಂದ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. ಜೈಲಿನಲ್ಲೇ ಐಸೊಲೇಶನ್ ವಾರ್ಡ್‌ಗೆ ಅವರನ್ನು ಸ್ಥಳಾಂತರಿಸಲಾಗಿದೆ. ಈ ವಾರ್ಡನ್ನು ರೋಗಲಕ್ಷಣ ಇಲ್ಲದ ರೋಗಿಗಳ ಆರೈಕೆಗೆ ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ.

ರೋಗಲಕ್ಷಣ ಕಂಡುಬಂದ ಕೈದಿಗಳನ್ನು ಗುವಾಹತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳವಾರದವರೆಗೆ ಗುವಾಹತಿ ಜೈಲಿನಲ್ಲಿ 435 ಕೈದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಅವರನ್ನು ದಿಲ್ಲಿಗೆ ಕರೆದೊಯ್ಯಲು ಆಗಮಿಸಿದ್ದ ದಿಲ್ಲಿ ಪೊಲೀಸರ ತಂಡ, ಇಮಾಮ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತನ್ನ ಯೋಜನೆಯನ್ನು ಕೈಬಿಟ್ಟಿದೆ.

ಜವಾಹರಲಾಲ್ ನೆಹರೂ ವಿವಿ ವಿದ್ಯಾರ್ಥಿಯಾಗಿರುವ ಇಮಾಮ್ ವಿರುದ್ಧ, ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News