ಕಲ್ಮನೆ ಕಾಮೇಗೌಡರಿಗೆ ಕೊರೋನ ಸೋಂಕು

Update: 2020-07-22 10:10 GMT

ಮಂಡ್ಯ, ಜು.22: ಕೆರೆ ಕಾಮೇಗೌಡ ಎಂದೇ ಗುರುತಿಸಲ್ಪಟ್ಟಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರಿಗೆ ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮನೆಗೆ ಹೋಗುವ ರಸ್ತೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.

 85 ವರ್ಷ ವಯಸ್ಸಿನ ಕಾಮೇಗೌಡರು ಬಲಗಾಲಿನಲ್ಲಿ ಆಗಿದ್ದ ಗಾಯದ ಸೋಂಕಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಮಳವಳ್ಳಿ ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಅವರು ಚಿಕಿತ್ಸೆ ಪಡೆದಿದ್ದರು. ಈ ನಡುವೆ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಮಳವಳ್ಳಿ ಪಟ್ಟಣದಿಂದ 10 ಕಿ.ಮೀ. ದೂರದಲ್ಲಿರುವ ಕುಂದೂರು ಬೆಟ್ಟದಲ್ಲಿ ಕಳೆದ 40 ವರ್ಷಗಳಿಂದ ಕೆರೆ, ಕಟ್ಟೆ ಕಾಲುವೆ ನಿರ್ಮಿಸಿದ ಹೆಗ್ಗಳಿಕೆಗ ಪಾತ್ರರಾಗಿರುವ ಕಾಮೇಗೌಡರನ್ನು ಇತ್ತೀಚೆಗೆ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News