ಬಾಂಗ್ಲಾದೇಶ ಪ್ರವಾಹದಿಂದ 54 ಸಾವು: ವಿಶ್ವಸಂಸ್ಥೆ

Update: 2020-07-22 16:07 GMT

ನ್ಯೂಯಾರ್ಕ್, ಜು. 22: ಬಾಂಗ್ಲಾದೇಶದಲ್ಲಿ ತಲೆದೋರಿರುವ ಭೀಕರ ಪ್ರವಾಹದಲ್ಲಿ ಕನಿಷ್ಠ 54 ಮಂದಿ ಮೃತಪಟ್ಟಿದ್ದಾರೆ ಹಾಗೂ 24 ಲಕ್ಷಕ್ಕೂ ಅಧಿಕ ಮಂದಿ ಹಾನಿಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು 1988ರ ಬಳಿಕದ ಅತ್ಯಂತ ಭೀಕರ ಪ್ರವಾಹವಾಗಿರುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಸುಮಾರು 56,000 ಮಂದಿ ಪ್ರವಾಹದಿಂದಾಗಿ ನಿರ್ವಸಿತರಾಗಿದ್ದಾರೆ ಹಾಗೂ ಈಗ ಅವರು ಸರಕಾರಿ ನಿರಾಶ್ರಿತ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ರ ವಕ್ತಾರ ಸ್ಟೀಫನ್ ಡುಜರಿಕ್ ಮಂಗಳವಾರ ಹೇಳಿದ್ದಾರೆ ಎಂದು ಕ್ಸಿನುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘‘ಇಂದಿನವರೆಗೆ ಕನಿಷ್ಠ 54 ಮಂದಿ ಪ್ರವಾಹದಿಂದಾಗಿ ಮೃತಪಟ್ಟಿದ್ದಾರೆ’’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡುಜರಿಕ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News