ಕೋವಿಡ್ ನಿಯಂತ್ರಿಸಲು ದ.ಕ. ಜಿಲ್ಲಾಡಳಿತ ವಿಫಲ ಆರೋಪ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Update: 2020-07-23 05:59 GMT

ಮಂಗಳೂರು, ಜು.23: ಕೋವಿಡ್19 ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ. ಕೋವಿಡ್ ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಿಯೋಗ ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು. 

ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಎದುರುಗಡೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್19 ನಿಯಂತ್ರಣಕ್ಕೆ ಮಾಡಿದ ಖರ್ಚಿನ ಲೆಕ್ಕ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ನಾಯಕರು, ಜಿಲ್ಲಾಡಳಿತದ ತಪ್ಪು ನೀತಿಯೇ 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣ. ಕೋವಿಡ್19 ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಅರ್ ಲೋಬೊ, ಮೊಯ್ದಿನ್ ಬಾವ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News