ಐವರು ಪೊಲೀಸರಿಗೆ ಕೊರೋನ ಸೋಂಕು: ಮೂಡುಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್

Update: 2020-07-23 06:24 GMT

ಮೂಡುಬಿದಿರೆ, ಜು.23: ಇಲ್ಲಿನ ಪೊಲೀಸ್ ಠಾಣೆಯ ಐವರು ಪೊಲೀಸರಿಗೆ ಕೊರೋನ ಸೋಕು ದೃಢಪಟ್ಟ ಹಿನ್ನಲೆಯಲ್ಲಿ ಬುಧವಾರ ರಾತ್ರಿಯಿಂದ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಸೋಂಕು ಹರಡಿರಬಹುದು ಎಂದು ಅಂದಾಜಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ಅವರು ಠಾಣೆಯಲ್ಲಿ ಕಳೆದ ಕೆಲ ತಿಂಗಳಿನಿಂದ ವಿವಿಧ ರೀತಿಯ ಕಷಾಯಗಳನ್ನು ಮಾಡಿಸಿ ಎಲ್ಲಾ ಸಿಬ್ಬಂದಿಗಳೂ ಕುಡಿಯುವಂತೆ ಮಾಡಿದ್ದರು. ಆದರೆ ಐವರು ಪೊಲೀಸ್ ಸಿಬ್ಬಂದಿಗೆ ಕೊರೋನದ ಕೆಲವೊಂದು ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿಯಲ್ಲಿ ಕೊರೋನ ಪಾಸಿಟಿವ್ ಬಂದಿದೆ. 

ಹೀಗಾಗಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News