ಕೇಂದ್ರದ ಸಹಯೋಗದೊಂದಿಗೆ `ಬಿಮ್ಸ್' ಮೇಲ್ದರ್ಜೆಗೆ: ಸಚಿವ ಪ್ರಭು ಚೌಹಾಣ್

Update: 2020-07-23 13:01 GMT

ಬೆಂಗಳೂರು ಜು 23: ಕೇಂದ್ರ ಸರಕಾರದ ಸಹಯೋಗದೊಂದಿಗೆ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್)ಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೊದನೆ ನೀಡಿದ್ದು, ಇದರಿಂದ ಆ ಭಾಗದಲ್ಲಿನ ಆರೋಗ್ಯ ಸೇವೆ ಹೆಚ್ಚು ಬಲಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆ ಅಡಿಯಲ್ಲಿ 36 ಕೋಟಿ ರೂ.ಗಳನ್ನು ಈಗಾಗಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿ ನಿರ್ಮಾಣ ಕಾಮಗಾರಿಯನ್ನು 7.50 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲು ಮತ್ತು 15.22 ಕೋಟಿ ರೂ.ಉಪಕರಣಗಳನ್ನು ಖರೀದಿ ಸೇರಿದಂತೆ ಒಟ್ಟು 17.50 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೊದನೆ ನೀಡಿದೆ ಎಂದರು.

ಸೀಟುಗಳ ಮಿತಿಯನ್ನು ಈಗಾಗಲೇ 100ರಿಂದ 150ಕ್ಕೆ ಹೆಚ್ಚಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರಿರುವುದರಿಂದ ಉಪನ್ಯಾಸಕರ ಕೊಠಡಿ, ಆಡಿಟೋರಿಯಂ, ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರ ಹಾಗೂ ಹಾಸ್ಟೇಲ್‍ಗಳ ಉನ್ನತೀಕರಣ ಎಂಸಿಐ ಮಾನದಂಡಗಳ ಪ್ರಕಾರ ಸಂಸ್ಥೆಗಳ ಅವಶ್ಯಕತೆಗಳನ್ನು ಪೂರೈಸುವಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ಸಹಕಾರಿಯಾಗಿದೆ.

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರಿಸಲು ಕೇಂದ್ರಕ್ಕೆ ಮನವಿಯನ್ನು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಚರ್ಚಿಸಿದ್ದೆ. ಹಿಂದಿನ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರೊಂದಿಗೆ ಈ ವಿಷಯದ ಕುರಿತು ಮಾತುಕತೆ ನಡೆಸಿದ್ದೆ. ಈ ಭಾಗದಲ್ಲಿ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರುತ್ತಿರುವುದು ಇಲ್ಲಿನ ಭಾಗದ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದಂತಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News