×
Ad

ಉದ್ಯಾವರ: ಸುಲಿಗೆ ಆರೋಪಿಗಳ ಬಂಧನ

Update: 2020-07-23 21:36 IST
ಮುಹಮ್ಮದ್ ಫಹಾದ್

ಉಡುಪಿ, ಜು.23: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳು ಕೈಯಿಂದ ಮೊಬೈಲ್ ಫೋನ್ ಕಿತ್ತು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಠಾಣಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಉದ್ಯಾವರ ಮೇಲ್ಪೆಟೆ ನಿವಾಸಿ ಮುಹಮ್ಮದ್ ಫಹಾದ್ ಹಾಗೂ ಇನ್ನೊಬ್ಬ ಸಂಪಿಗೆನಗರ ಕಂಪನಬೆಟ್ಟು ನಿವಾಸಿ, ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತ ಆರೋಪಿಗಳಾಗಿದ್ದಾರೆ.

ಮೇ 27ರಂದು ಬೆಳಗ್ಗೆ ಬ್ರಹ್ಮಾವರ ತಾಲೂಕು ಹಂದಾಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ರಕ್ಷಾ ಎಂಬವರ ಕೈಯಿಂದ ಬೈಕಿನಲ್ಲಿ ಬಂದ ಇಬ್ಬರಪ ಮೊಬೈಲ್ ಕಿತು ಪರಾರಿಯಾಗಿದ್ದರು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜು.23ರಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಮುಹಮ್ಮದ್ ಫಹಾದ್ ವಿರುದ್ಧ ಈ ಮೊದಲು ಮಣಿಪಾಲ ಠಾಣೆಯಲ್ಲಿ ಸುಲಿಗೆ, ಗಾಂಜಾ ಮಾರಾಟ ಮಾಡಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ಹಾಗೂ ಗಾಂಜಾ ಸೇವನೆ ಮಾಡಿದ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ಸುಲಿಗೆ ಮಾಡಿ ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News