ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಸಿಕೊಳ್ಳುವ ವಿಚಾರ: ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಹೈಕೋರ್ಟ್ ಆದೇಶ

Update: 2020-07-23 16:41 GMT

ಬೆಂಗಳೂರು, ಜು.23: ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈ ಸಮಸ್ಯೆಯನ್ನು ತಡೆಗಟ್ಟಲು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆ ಸಲ್ಲಿಕೆಯಾಗಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಬಾಲ ನ್ಯಾಯ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ನಿಯಮಗಳನ್ನು ರೂಪಿಸಬೇಕೆಂದು ಸೂಚನೆ ನೀಡಿತು.

ಮಕ್ಕಳ ನಾಪತ್ತೆ ಹಾಗೂ ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಇದರಿಂದ, ಈ ಸಮಸ್ಯೆಗಳು ದೊಡ್ಡದಾಗಿ ಬೆಳೆದಿವೆ. ಸರಕಾರ ಎಸ್‍ಒಪಿ ರಚಿಸುವ ಮೂಲಕ ಈ ಸಮಸ್ಯೆಗಳಿಗೆ ಕಡಿವಾಣ ಹಾಕಬೇಕೆಂದು ಆದೇಶ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News