ಕೆಪಿಸಿಸಿಯ ವಿವಿಧ ವಿಭಾಗಗಳಿಗೆ ಅಧ್ಯಕ್ಷರ ನೇಮಕ

Update: 2020-07-23 17:52 GMT

ಬೆಂಗಳೂರು, ಜು.23: ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್‍ಟಿಐ ವಿಭಾಗ, ಕಾನೂನು ಸುಧಾರಣೆ ವಿಭಾಗ ಸೇರಿದಂತೆ ಇನ್ನಿತರ ವಿಭಾಗಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವಂತೆ ಕೋರಿ ಕೆಪಿಸಿಸಿ ಸಲ್ಲಿಸಿದ್ದ ಶಿಫಾರಸ್ಸಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅನುಮೋದನೆ ನೀಡಿದ್ದಾರೆ.

ಕಾನೂನು, ಮಾನವ ಹಕ್ಕುಗಳು ಹಾಗೂ ಆರ್‍ಟಿಐ ವಿಭಾಗದ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪೊನ್ನಣ್ಣ, ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಹಾಗೂ ಸಹ ಅಧ್ಯಕ್ಷರಾಗಿ ವಿ.ಆರ್.ಸುದರ್ಶನ್, ಮಾಹಿತಿ ತಂತ್ರಜ್ಞಾನ ಹಾಗೂ ಡೆಟಾ ಸೆಲ್‍ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯನ್ನು ನೇಮಕ ಮಾಡಲಾಗಿದೆ.

ಕಾನೂನು ಸುಧಾರಣೆ ವಿಭಾಗದ ಅಧ್ಯಕ್ಷರನ್ನಾಗಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ರಾಜ್ಯದಲ್ಲಿನ ಕಾಂಗ್ರೆಸ್ ಪಕ್ಷದ ಆಸ್ತಿಗಳ ಸಂರಕ್ಷಣೆಯ ಹೊಣೆ ಮಾಜಿ ಸಚಿವ ಕೆ.ಜೆ.ಜಾರ್ಜ್‍ಗೆ ವಹಿಸಲಾಗಿದೆ. ಅದೇ ರೀತಿ ರಾಜಧಾನಿ ಬೆಂಗಳೂರು ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಆಸ್ತಿಗಳ ಸಂರಕ್ಷಣೆಯ ಹೊಣೆಯನ್ನು ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ವಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News