ಈ ದಿನಾಂಕದಿಂದ ಯುಎಇಯಲ್ಲಿ ಐಪಿಎಲ್ ಆರಂಭ?
Update: 2020-07-23 23:32 IST
ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯುಎಇಯಲ್ಲಿ ಸೆಪ್ಟಂಬರ್ 19ರಂದು ಪ್ರಾರಂಭವಾಗಲಿದ್ದು, ನವೆಂಬರ್ 8ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐನ ಉನ್ನತ ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
“ಸೆಪ್ಟಂಬರ್ 19 (ಶನಿವಾರ) ರಂದು ಐಪಿಎಲ್ ಆರಂಭವಾಗುವ ಸಾಧ್ಯತೆಯಿದ್ದು, ನವೆಂಬರ್ 8ರಂದು ಫೈನಲ್ ಪಂದ್ಯ ನಡೆಯಲಿದೆ” ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.