ಸಿದ್ದರಾಮಯ್ಯ ನೀಡಿರುವ ಸಹಕಾರ, ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ: ಸಚಿವ ಡಾ.ಸುಧಾಕರ್

Update: 2020-07-24 11:49 GMT

ಬೆಂಗಳೂರು, ಜು. 24: `ವೈದ್ಯಕೀಯ ಶಿಕ್ಷಣ ಇಲಾಖೆ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟಿದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ' ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಪ್ರತಿಕ್ರಿಯೆಗೆ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, `ಐದು ತಿಂಗಳಿಂದ ವೈದ್ಯಕೀಯ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿದ್ದೇನೆ. ಇಂತಹ ಸನ್ನಿವೇಶದಲ್ಲಿ ಆರೋಪ ಸರಿಯಲ್ಲ' ಎಂದು ಆಕ್ಷೇಪಿಸಿದ್ದಾರೆ.

ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡುತ್ತಿದ್ದೇನೆ ಮತ್ತು ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶವನ್ನು ಸದಾ ಸ್ಮರಿಸುತ್ತೇನೆ ಮತ್ತು ನನ್ನ ಅಳಿಲು ಸೇವೆಯನ್ನು ಅವರೂ ಮರೆತಿಲ್ಲ ಎಂದು ಭಾವಿಸಿದ್ದೇನೆ ಎಂದು ಡಾ.ಸುಧಾಕರ್, ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News