ಕಾನೂನು ಸುವ್ಯವಸ್ಥೆಯಿಲ್ಲದ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ: ಟ್ವಿಟರಿಗರ ಒತ್ತಾಯ

Update: 2020-07-24 14:22 GMT

ಹೊಸದಿಲ್ಲಿ: ಆದಿತ್ಯನಾಥ್ ಸರಕಾರ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಟ್ವಿಟರಿಗರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದ ನಂತರ ಹಲವು ಪ್ರಕರಣಗಳಿಗೆ ಸಂಬಂಧಿಸಿ ಆದಿತ್ಯನಾಥ್ ಸರಕಾರದ ವಿರುದ್ಧ ಸಾಮಾಜಿಕ ಜಾಲತಾಣದ ಬಳಕೆದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ ಟ್ವಿಟರ್ ನಲ್ಲಿ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಆಗ್ರಹಿಸಿ #PRESIDENTRULEINUP ಟ್ರೆಂಡಿಂಗ್ ಆಗಿದೆ. ಆದಿತ್ಯನಾಥ್ ಆಡಳಿತದಲ್ಲಿ ಉತ್ತರಪ್ರದೇಶ ಕಾನೂನಿಲ್ಲದ ರಾಜ್ಯವಾಗಿದ್ದು, ಕ್ರಿಮಿನಲ್ ಗಳ ಪಾಲಿಗೆ ಸ್ವರ್ಗವಾಗಿದೆ ಎಂದು ಟ್ವಿಟರಿಗರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News