ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆ: ಸಾವಿರಾರು ಎಕರೆ ಬೆಳೆ ಹಾನಿ

Update: 2020-07-24 15:42 GMT

ಕಲಬುರಗಿ, ಜು.24: ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಮೂರು ಸಾವಿರ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೈತರು ಬೆಳೆ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರೀ ಮಳೆಗೆ ಕೃಷಿ ಜಮೀನು ಜಲಾವೃತವಾಗಿದ್ದು, ಹೆಸರು, ಉದ್ದು, ತೊಗರಿ, ಶೇಂಗಾ, ಎಳ್ಳು ಬೆಳೆಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಚಿಂಚೋಳಿ ತಾಲೂಕಿನ ಐನೋಳ್ಳಿ, ಗಣಾಪುರ, ಬಾಸ್ಪಲ್ಲಿ, ಸಂಗ್ಯೆಮ್ಮ, ಮಿರಿಯಾಣ, ಕಲ್ಲೂರು ಭಾಗದಲ್ಲಿ ಅತೀ ಹೆಚ್ಚು ಬೆಳೆಹಾನಿಯಾಗಿದೆ.

ವಾಡಿಕೆಗಿಂತ ಈ ವರ್ಷ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಸುರಿದಿದ್ದು, ಜಿಲ್ಲೆಯಾದ್ಯಂತ ಸುಮಾರು ಮೂರು ಸಾವಿರ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸರ್ವೇ ಕಾರ್ಯ ನಡೆದಿದ್ದು, ರೈತರೂ ಬೆಳೆ ಪರಿಹಾರದ ನೀರಿಕ್ಷೆಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News