ಪತ್ರಕರ್ತರ ಕ್ಷೇಮಾಭಿವೃದ್ದಿ ನಿಗಮ ಸ್ಥಾಪಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯ

Update: 2020-07-24 18:00 GMT

ಬೆಂಗಳೂರು, ಜು.24: ಕೊರೋನ ಸೋಂಕಿನಿಂದಾಗಿ ಸಾಕಷ್ಟು ಸಂಖ್ಯೆಯಲ್ಲಿ ಪತ್ರಕರ್ತರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಪತ್ರಕರ್ತ ಸಮುದಾಯಕ್ಕೂ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಕೋವಿಡ್ ಹಿನ್ನೆಲೆಯಲ್ಲಿ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿ ಮನವಿ ಪತ್ರ ಸಲ್ಲಿಸಿತು.

ಕಳೆದ ಕೆಲವು ತಿಂಗಳಿನಿಂದ ವಿವಿಧ ಮಾಧ್ಯಮಗಳು ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಪತ್ರಕರ್ತರನ್ನು ಹೊರ ಹಾಕುತ್ತಿವೆ. ಹತ್ತು, ಇಪ್ಪತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರವನ್ನೇ ನಂಬಿಕೊಂಡಿದ್ದ ಪತ್ರಕರ್ತರು ನಿಗರ್ತಿಕರಾಗುತ್ತಿದ್ದಾರೆ. ಹೀಗಾಗಿ ಪತ್ರಕರ್ತರ ಕ್ಷೇಮಕ್ಕಾಗಿ ಪತ್ರಕರ್ತರ ಕ್ಷೇಮಾಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಸರಕಾರ ನೆರವಿಗೆ ಬರಬೇಕು.

ಪತ್ರಕರ್ತರನ್ನು ಕೇವಲ ಮಾಧ್ಯಮಕ್ಕೆ ಸೀಮಿತಗೊಳಿಸದೆ ಸರಕಾರಿ ಇಲಾಖೆ, ನಿಗಮ, ಮಂಡಳಿಗಳಲ್ಲಿ ಪಿಆರ್‍ಒಗಳಾಗಿ ನೇಮಕ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಬೇಕು. ವಾರ್ತಾ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಮುಖಾಂತರ ತಯಾರಾಗುವ ಸಾಕ್ಷ್ಯ ಚಿತ್ರಗಳಿಗೆ ಪತ್ರಕರ್ತರನ್ನು ತೊಡಗಿಸಿಕೊಳ್ಳಬೇಕು. ಹಾಗೂ ಸಾಲ ಸೌಲಭ್ಯ ನೀಡಬೇಕೆಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮನವಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News