×
Ad

ಹೈದರಾಬಾದ್ ಎನ್‌ಕೌಂಟರ್ ಪ್ರಕರಣದ ತನಿಖೆಗೆ 6 ತಿಂಗಳು ಹೆಚ್ಚುವರಿ ಅವಕಾಶ ನೀಡಿದ ಸುಪ್ರೀಂ

Update: 2020-07-24 23:40 IST

ಹೊಸದಿಲ್ಲಿ, ಜು.24: ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ನಾಲ್ವರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಆಯೋಗಕ್ಕೆ 6 ತಿಂಗಳ ಹೆಚ್ಚುವರಿ ಅವಕಾಶವನ್ನು ಸುಪ್ರೀಂಕೋರ್ಟ್ ನೀಡಿದೆ.

ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಸಲು, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶ ವಿಎಸ್ ಸಿರ್ಪುರ್ಕರ್, ಬಾಂಬೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ರೇಖಾ ಸೊಂಡೂರು ಮತ್ತು ಸಿಬಿಐ ಮಾಜಿ ನಿರ್ದೇಶಕ ಡಿಆರ್ ಕಾರ್ತಿಕೇಯನ್ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಆಯೋಗವನ್ನು ಕಳೆದ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ನೇಮಿಸಿತ್ತು. ತನಿಖಾ ಪ್ರಕ್ರಿಯೆ ಮುಗಿಸಲು ಹೆಚ್ಚುವರಿ ಅವಕಾಶ ಕೋರಿ ತನಿಖಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು 6 ತಿಂಗಳ ಹೆಚ್ಚುವರಿ ಅವಕಾಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News