‘ರಾಜಸ್ಥಾನದಲ್ಲಿ ಸಾಂವಿಧಾನಿಕ ಬಿಕ್ಕಟ್ಟು’: ರಾಜ್ಯಪಾಲರನ್ನು ಭೇಟಿಯಾದ ಬಳಿಕ ಬಿಜೆಪಿ ಆರೋಪ

Update: 2020-07-25 15:39 GMT

ಜೈಪುರ: ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರಕಾರವು ಸಾಂವಿಧಾನಿಕ ಬಿಕ್ಕಟ್ಟಿನೆಡೆಗೆ ಸಾಗುತ್ತಿದೆ ಎಂದು ಬಿಜೆಪಿ ಹೇಳಿದೆ. ಕೊರೋನ ವೈರಸ್ ವಿಚಾರಕ್ಕೆ ಸಂಬಂಧಿಸಿ ರಾಜ್ಯಪಾಲ ಕಲ್ ರಾಜ್ ಮಿಶ್ರಾರನ್ನು 12 ಮಂದಿ ಬಿಜೆಪಿ ನಾಯಕರ ನಿಯೋಗ ಭೇಟಿಯಾದ ಬಳಿಕ ಈ ಹೇಳಿಕೆ ನೀಡಿದೆ.

ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯ ನಿರ್ವಹಿಸಲು ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ನಾಯಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕರು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News