ಅನರ್ಹ ಶಾಸಕ ಮುನಿರತ್ನಗೆ ಶುಭ ಕೋರಿದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

Update: 2020-07-25 16:27 GMT

ಬೆಂಗಳೂರು, ಜು.25: ಸಿನಿಮಾ ನಿರ್ಮಾಪಕ ಹಾಗೂ ರಾಜಕಾರಣಿ ಮುನಿರತ್ನ ಅವರಿಗೆ ನಟನಾಗಿ ನಾನು ಶುಭ ಕೋರಿದ್ದೇನೆಯೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮುನಿರತ್ನ ಹುಟ್ಟುಹಬ್ಬಕ್ಕೆ ನಿಖಿಲ್ ಕುಮಾರಸ್ವಾಮಿ ಶುಭಾಶಯ ಕೋರಿದ್ದಕ್ಕೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭ ಕೋರಬಾರದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ಈ ಹಿನ್ನೆಲೆ ಸ್ಪಷ್ಟನೆ ನೀಡಿರುವ ನಿಖಿಲ್ ಕುಮಾರಸ್ವಾಮಿ ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ. ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ. ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ. ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ. ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ ಎಂದು ನುಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News