ಕಾಸರಗೋಡು: ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ 43 ಮಂದಿಗೆ ಕೊರೋನ ಪಾಸಿಟಿವ್

Update: 2020-07-25 17:11 GMT

ಕಾಸರಗೋಡು: ಚೆಂಗಳ ಗ್ರಾಮ ಪಂಚಾಯತ್ ನ ನಾಲ್ಕನೇ ವಾರ್ಡ್ ನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರ ಮನೆಯಲ್ಲಿ ಜು.17ರಂದು ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ 43 ಮಂದಿಗೆ  ಕೊರೋನ  ಸೋಂಕು ದೃಢಪಟ್ಟಿದೆ.
ಸಮಾರಂಭದಲ್ಲಿ ಭಾಗವಹಿಸಿದ್ದ ಎಲ್ಲರೂ 14 ದಿನಗಳ ಕಾಲ ಸ್ವಯಂ ಕ್ವಾರೆಂಟೈನ್ ನಲ್ಲಿ ಮನೆಗಳಲ್ಲಿ
ಇರಬೇಕು ಎಂದೂ, ರೋಗ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬೇಕುಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ

ಈ ಆದೇಶ ಉಲ್ಲಂಘಿಸುವವರ ವಿರುದ್ಧ ಮತ್ತು  ಕೊರೋನ  ಮಾನದಂಡ ಉಲ್ಲಂಘಿಸಿ ಈ ರೀತಿಯ ಸಮಾರಂಭ ನಡೆಸಿದ ವ್ಯಕ್ತಿಯ ವಿರುದ್ಧ ಕೇರಳ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಂತೆ ಕಾನೂನು ಕ್ರಮ ಕೈಗೊಳ್ಳಲು
ಜಿಲ್ಲಾಧಿಕಾರಿ ಪೊಲೀಸರಿಗೆ ಆದೇಶ ನೀಡಿದರು. 

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಅವಧಿಯಲ್ಲಿ ಸಾರ್ವಜನಿಕರು ನಿಗದಿತ ಸಂಖ್ಯೆಗಿಂತ ಅಧಿಕವಾಗಿ ಸೇರುವ ಸಮಾರಂಭಗಳನ್ನು ಪೂರ್ಣರೂಪದಲ್ಲಿ ಕೈಬಿಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ . 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News