ಜು.28: ‘ಜನವಾದಿ ಮಹಿಳಾ ಸಂಘಟನೆ’ಯಿಂದ ಮಂಗಳೂರು ಮಿನಿ ವಿಧಾನಸೌಧದ ಎದುರು ಧರಣಿ

Update: 2020-07-26 04:52 GMT

ಮಂಗಳೂರು, ಜು.26: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮಿತಿಯು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿರಿ,  ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿರಿ, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿರಿ,  ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಆ್ಯಂಬುಲೆನ್ಸ್ ಒದಗಿಸಿರಿ, ಗರ್ಭಿಣಿ ಮತ್ತು ಬಾಣಂತಿಯರು ಹಾಗೂ ಮಕ್ಕಳ ಪಾಲನೆಗೆ ಅಗತ್ಯವಾದ ಮಾತ್ರಶ್ರೀ ಯೋಜನೆಯನ್ನು ಮುಂದುವರಿಸಿರಿ, ಪೌಷ್ಟಿಕ ಆಹಾರ ಪದಾರ್ಥಗಳನ್ನು ಕೇರಳ ಮಾದರಿಯಲ್ಲಿ ವಿತರಿಸಿರಿ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಜು.28ರಂದು ಬೆಳಗ್ಗೆ 10:30ಕ್ಕೆ ಮಂಗಳೂರು ಮಿನಿ ವಿಧಾನಸೌಧದ ಎದುರು ಧರಣಿ ನಡೆಸಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News