ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನ: ಡಿ.ಕೆ.ಸುರೇಶ್

Update: 2020-07-26 13:10 GMT

ಬೆಂಗಳೂರು, ಜು.26: ಕೋವಿಡ್ ಬಿಕ್ಕಟ್ಟಿನ ಕಾಲದಲ್ಲೂ ಬಿಜೆಪಿ, ಬಹುಮತ ಇರುವ ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಪತನಗೊಳಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಮಾಡಿದ ಕೀಳು ರಾಜಕೀಯವನ್ನೆ ಬಿಜೆಪಿ ಇದೀಗ ರಾಜಸ್ಥಾನದಲ್ಲೂ ಮಾಡುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಡೀ ಜಗತ್ತೇ ಗೌರವಿಸುವ ಬಹು ಭಾಷೆ, ಬಹು ಧರ್ಮ, ಬಹು ಸಂಸ್ಕೃತಿಯಲ್ಲಿ ಏಕತೆಯನ್ನು ಮೆರೆಯುತ್ತಿರುವ ಭಾರತದ ಪ್ರಜಾಪ್ರಭುತ್ವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನ ರಕ್ಷಿಸಿಕೊಳ್ಳಬೇಕಾಗಿದೆ. ಇದಕ್ಕಾಗಿ ನಾವು ನೀವೆಲ್ಲ ಸೇರಿ ಹೋರಾಟ ಮಾಡೋಣ, ಬನ್ನಿ ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News