×
Ad

ಆಪರೇಷನ್ ಕಮಲ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಎತ್ತಬೇಕು: ಡಿ.ಕೆ.ಶಿವಕುಮಾರ್

Update: 2020-07-26 18:41 IST

ಬೆಂಗಳೂರು, ಜು.26: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎನ್ನುವ ಜಾಗತಿಕ ಹೆಗ್ಗಳಿಕೆಯನ್ನು ಬಿಜೆಪಿ ಪಕ್ಷದ ಆಪರೇಷನ್ ಕಮಲ ನಾಶ ಮಾಡುತ್ತಿದ್ದು, ವಿಶ್ವದ ಎದುರು ಭಾರತ ತಲೆ ತಗ್ಗಿಸುವಂತಾಗಿದೆ. ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆಗಳ ವಿರುದ್ಧ ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಎತ್ತಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಕರೆ ನೀಡಿದ್ದಾರೆ.

ಬಿಜೆಪಿ ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನ, ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡುತ್ತಿದೆ. ಅಧಿಕಾರ ದುರ್ಬಳಕೆಯ ಮೂಲಕ ರಾಜ್ಯಸ್ಥಾನದ ರಾಜಭವನವನ್ನ ದುರುಪಯೋಗ ಮಾಡಿಕೊಳ್ಳುತ್ತಿದೆ. ಇದರ ವಿರುದ್ಧ ಹಾಗೂ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಹೋರಾಟ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ವಾಮಮಾರ್ಗದ, ಅಧಿಕಾರದಾಹಿ ರಾಜಕಾರಣವನ್ನು ನೀವೆಲ್ಲಾ ಗಮನಿಸುತ್ತಿದ್ದೀರ. ಕರ್ನಾಟಕ, ಮಧ್ಯಪ್ರದೇಶಗಳಲ್ಲಿ ಏನಾಯಿತು, ಮಹಾರಾಷ್ಟ್ರದಲ್ಲಿ ಮಧ್ಯರಾತ್ರಿ ಏನು ನಡೆಯಿತು ಎಂದು ನಿಮಗೆ ತಿಳಿದಿದೆ. ಇದೀಗ ರಾಜಸ್ಥಾನದಲ್ಲೂ ಅದೇ ಕೀಳು ರಾಜಕೀಯ ನಡೆಯುತ್ತಿದ್ದು, ಇದನ್ನು ನಾವು ವಿರೋಧಿಸಬೇಕು ಎಂದು ಶಿವಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News