ಬೆಂಗಳೂರಿನಲ್ಲಿ ಎರಡು ದಿನಗಳಲ್ಲಿ 36 ಪೊಲೀಸರಿಗೆ ಕೊರೋನ ಸೋಂಕು

Update: 2020-07-26 15:10 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.26: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆ ಆಗುತ್ತಿದ್ದು, ಎರಡು ದಿನಗಳಲ್ಲಿ ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರೈಲ್ವೆ ಸಂರಕ್ಷಣಾ ಪಡೆ (ಆರ್‍ಪಿಎಫ್) ಹಾಗೂ ರೈಲ್ವೆ ವಿಶೇಷ ಸಂರಕ್ಷಣಾ ಪಡೆ (ಆರ್‍ಎಸ್‍ಪಿಎಫ್) ನ 36 ಪೊಲೀಸರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

ಸೋಂಕಿತ ಪೊಲೀಸರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಾರ್ಯ ನಿರ್ವಹಿಸುತ್ತಿದ್ದ ಸ್ಥಳವನ್ನು ತಾತ್ಕಲಿಕವಾಗಿ ಬಂದ್ ಮಾಡಲಾಗಿದೆ. ಇನ್ನು, ಈ ಕುರಿತು ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾ ಅವರು ಟ್ವೀಟ್ ಮಾಡಿದ್ದು, ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ವರದಿ ನೆಗಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News