ಸಾಮಾಜಿಕ ಜಾಲತಾಣಗಳಲ್ಲಿ ತನ್ನದಲ್ಲದ ಹೇಳಿಕೆ ಪ್ರಚಾರ: ನ್ಯಾ.ಸಂತೋಷ್ ಹೆಗ್ಡೆ ಅಸಮಾಧಾನ

Update: 2020-07-26 16:14 GMT

ಬೆಂಗಳೂರು, ಜು.26: ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ತಮಗೆ ಬೇಕಾದ ರೀತಿಯಲ್ಲಿ ಕೆಲವು ಹೇಳಿಕೆಗಳನ್ನು ಸೃಷ್ಟಿಸಿ ಇದು ಸಂತೋಷ್ ಹೆಗ್ಡೆ ಅವರ (ಸ್ಟೇಟ್ ಮೆಂಟ್) ಹೇಳಿಕೆ ಎಂದು ಅನೇಕ ಬಾರಿ ಬಿಂಬಿಸುವ ಪ್ರಯತ್ನ ನಡೆದಿದೆ. ಇದು ಸರಿಯಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆ ವಿರುದ್ದ ನಾನು ಸಾಕಷ್ಟು ಬಾರಿ ಧ್ವನಿ ಎತ್ತಿದ್ದೇನೆ. ಮುಂದೆಯೂ ಅಗತ್ಯ ಸಂದರ್ಭಗಳಲ್ಲಿ ಇದು ಇದ್ದೇ ಇರುತ್ತದೆ. ಆದರೆ ನನ್ನದಲ್ಲದ ಹೇಳಿಕೆ, ಇಲ್ಲವೇ ಅವರಿಗೆ ಬೇಕಾದ ರೀತಿಯಲ್ಲಿ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡಲ್ಲಿ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ನೇರವಾಗಿ ಮಾಧ್ಯಮ ಮಿತ್ರರು ಸಂಪರ್ಕ ಮಾಡಿ ಪ್ರತಿಕ್ರಿಯೆ ಪಡೆಯುತ್ತಾರೆ. ಆದರೆ ನನ್ನದಲ್ಲದ ಮಾತನ್ನು ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಪ್ರಚುರಪಡಿಸಬಾರದೆಂದು ತಿಳಿಸುತ್ತೇನೆ ಸಂತೋಷ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News