ಚಿಕಿತ್ಸೆ ನೀಡಲು ಹಿಂದೇಟು ಹಾಕುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

Update: 2020-07-26 16:30 GMT

ಬೆಳಗಾವಿ, ಜು.26: ಕೊರೋನ ಸೋಂಕಿನ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಹಿಂದೇಟು ಹಾಕುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ರವಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಒಂದು ವಾರದಿಂದ ಕರ್ನಾಟದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಸರಕಾರ ವೈದ್ಯರ ಜೊತೆಗೆ ಖಾಸಗಿ ವೈದ್ಯರು ಕೂಡ ಕೈ ಜೋಡಿಸುತ್ತಿದ್ದಾರೆ. ಕೆಲವೊಂದಿಷ್ಟು ವೈದ್ಯರು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಅಂತಹ ವೈದ್ಯರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಬಿಜೆಪಿ ಸರಕಾರ ಕೋವಿಡ್ ವಿಚಾರವಾಗಿ ಭ್ರಷ್ಟಾಚಾರ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್-19 ಸಲುವಾಗಿ ನಾವು ಖರ್ಚು ಮಾಡಿದೆಷ್ಟು ಅವರು ಆರೋಪ ಮಾಡಿದೆಷ್ಟು ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಪುಟ ಸಚಿವರು ಉತ್ತರ ನೀಡಿದ್ದಾರೆ.ಅಲ್ಲದೆ, ವಿರೋಧ ಮಾಡಲಿಕ್ಕಾಗಿಯೇ ವಿರೋಧ ಪಕ್ಷದವರು ಆರೋಪ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News