ಎಪಿಎಂಸಿ ಮಾರುಕಟ್ಟೆ ಶುಲ್ಕ ಇಳಿಕೆ: ಸರಕಾರದ ನಿರ್ಧಾರ ಸ್ವಾಗತಾರ್ಹ- ಎಫ್‍ಕೆಸಿಸಿಐ

Update: 2020-07-26 17:35 GMT

ಬೆಂಗಳೂರು, ಜು.26: ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇ 0.35 ಕ್ಕೆ ನಿಗದಿಗೊಳಿಸಿರುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ ಎಂದು ಎಫ್‍ಕೆಸಿಸಿಐ ಮಹಾ ಸಂಸ್ಥೆ ತಿಳಿಸಿದೆ.

ರವಿವಾರ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಫ್‍ಕೆಸಿಸಿಐ ಅಧ್ಯಕ್ಷ ಸಿ.ಆರ್.ಜನಾರ್ಧನ್, ನಮ್ಮ ಸಂಸ್ಥೆಯ ಮನವಿಗೆ ಸ್ಪಂದಿಸಿ ಶುಲ್ಕ ಇಳಿಕೆ ಮಾಡಿರುವುದು ಉತ್ತಮ ಬೆಳವಣಿಗೆ. ಇದು ಎಪಿಎಂಸಿ ವರ್ತಕರ ಬಹುದಿನಗಳ ಬೇಡಿಕೆಯಾಗಿದ್ದು, ಇದನ್ನು ಈಡೇರಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಧಿಸೂಚಿತ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಸಮಿತಿಗಳು ಆಕರಿಸುತ್ತಿರುವ ಮಾರುಕಟ್ಟೆ ಶುಲ್ಕ, ಬಳಕೆದಾರರ ಶುಲ್ಕವನ್ನು ಇಳಿಸಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಜೊತೆಗೆ ಎಪಿಎಂಸಿ ವರ್ತಕರು ಹಾಗೂ ಎಪಿಎಂಸಿ ಪ್ರಾಂಗಣಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕುಟುಂಬಗಳ ಹಿತ ಕಾಪಾಡುವಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News