ಬಕ್ರೀದ್: ಪೊಲೀಸ್ ಬಂದೋಬಸ್ತ್ ಗೆ ದ.ಕ. ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ

Update: 2020-07-27 10:27 GMT

ಮಂಗಳೂರು, ಜು.27: ಜುಲೈ 31ರಂದು ಅಚರಿಸಲ್ಪಡುವ ಬಕ್ರೀದ್ ಹಬ್ಬ ಹಾಗೂ ಬಳಿಕದ ಮೂರು ದಿನಗಳ ಕಾಲ ನಡೆಯುವ ಕುರ್ಬಾನಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರಿಗೆ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ. ಎಂ. ಮುಮ್ತಾಝ್ ಅಲಿ, ಕಾರ್ಯದರ್ಶಿಗಳಾದ ಸಿ.ಎಂ. ಹನೀಫ್, ಡಿ.ಎಂ. ಅಸ್ಲಂ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News