ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಉಮರ್ ಅಬ್ದುಲ್ಲಾ

Update: 2020-07-27 13:24 GMT

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುವವರೆಗೆ ತಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಹೇಳಿದ್ದಾರೆ.

“ನನ್ನ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುವವರೆಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಾನು ನಿರ್ಧಾರ ಕೈಗೊಂಡಿದ್ದೇನೆ” ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡುತ್ತಾ ಅವರು ಹೇಳಿದರು.

“ಆಗಸ್ಟ್ 5ರ ಬೆಳವಣಿಗೆಗಳ (370ನೆ ವಿಧಿ ರದ್ದತಿ) ಕೆಲ ದಿನಗಳ ಮೊದಲು ನಮ್ಮಲ್ಲಿ ಕೆಲವರು, ನ್ಯಾಶನಲ್ ಕಾನ್ಫರೆನ್ಸ್ ನ ಹಿರಿಯ ಸದಸ್ಯರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು. ಆ ಭೇಟಿಯನ್ನು ನಾನು ಬೇಗನೇ ಮರೆಯುವುದಿಲ್ಲ. ಮುಂದಿನ 72 ಗಂಟೆಗಳಲ್ಲಿ ಏನು ನಡೆಯಿತೋ ಅದಕ್ಕಿಂತ ಸಂಪೂರ್ಣ ಭಿನ್ನ ಅಭಿಪ್ರಾಯದೊಂದಿಗೆ ಆ ಮಾತುಕತೆ ಮುಗಿದಿತ್ತು. ನಾನು ಒಂದು ದಿನ ಈ ಬಗ್ಗೆ ಬರೆಯುತ್ತೇನೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನನಗೆ ಏನನ್ನೂ ಹೇಳಲಾಗದು” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News