ಬೆಂಗಳೂರು: ಆರು ದಿನಗಳಲ್ಲಿ 50ಕ್ಕೂ ಹೆಚ್ಚು ಮಂದಿಯಿಂದ ಪ್ಲಾಸ್ಮಾ ದಾನ

Update: 2020-07-27 15:38 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.27: ನಗರದಲ್ಲಿ ಕೊರೋನ ಗೆದ್ದ ಸುಮಾರು 50ಕ್ಕೂ ಹೆಚ್ಚು ಮಂದಿ ಕಳೆದ ಆರು ದಿನಗಳಲ್ಲಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ. ಅಲ್ಲದೇ, 150ಕ್ಕೂ ಹೆಚ್ಚು ಮಂದಿ ದಾನ ಮಾಡಲು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಡಾ. ವಿಶಾಲ್ ರಾವ್ ಜು.21ರಂದು ನಗರದ ಎಚ್‍ಸಿಜಿ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಕೇಂದ್ರ ಆರಂಭಿಸಲಾಗಿತ್ತು. ಈ ಆಸ್ಪತ್ರೆಯಲ್ಲಿ ಒಂದು ಸಾವಿರ ಯೂನಿಟ್ ಪ್ಲಾಸ್ಮಾ ಶೇಖರಣೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಕೊರೋನ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಬಹುದಾಗಿದೆ. ಕೆಲವರು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಪ್ಲಾಸ್ಮಾ ದಾನ ಮಾಡಲು ಹೆಸರು ನೋಂದಾಯಿಸಿಕೊಂಡವರಿಗೆ ದಿನಾಂಕ ನಿಗದಿ ಮಾಡುತ್ತೇವೆ. ನಿಗದಿ ಪಡಿಸಿದ ದಿನ ದಾನಿಗಳು ಬಂದು ಪ್ಲಾಸ್ಮಾ ದಾನ ಮಾಡಬೇಕಾಗುತ್ತದೆ. ಇದುವರೆಗೂ 50 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನ ಮಾಡಿದ್ದು, ಇನ್ನು ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹಂತ ಹಂತವಾಗಿ ಎಲ್ಲಾ ದಾನಿಗಳಿಂದ ಪ್ಲಾಸ್ಮಾ ಸಂಗ್ರಹ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News