ಲಾಕ್‌ಡೌನ್ ಮಾಡದೇ ಇರಲು ಕೇರಳ ಸಂಪುಟ ನಿರ್ಧಾರ

Update: 2020-07-27 15:55 GMT

 ತಿರುವನಂತಪುರ, ಜು. 27: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ನಿರಂತರ ಹೆಚ್ಚುತ್ತಿರುವ ಹೊರತಾಗಿಯೂ ಸಂಪೂರ್ಣ ಲಾಕ್‌ಡೌನ್ ಮಾಡದಿರಲು ಸೋಮವಾರ ನಡೆದ ಕೇರಳ ಸಂಪುಟದ ವಿಶೇಷ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರಕಾರ ಏರ್ಪಡಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್‌ಗೆ ಬೆಂಬಲ ವ್ಯಕ್ತವಾಗಿರಲಿಲ್ಲ. ಇದಾದ ಮೂರು ದಿನಗಳ ಬಳಿಕ ಸರಕಾರ ಈ ನಿರ್ಧಾರಕ್ಕೆ ಬಂದಿದೆ.

ಲಾಕ್‌ಡೌನ್ ಬದಲು ಸರಕಾರ ರಾಜ್ಯದ ತೀವ್ರ ಬಾಧಿತ ಪ್ರದೇಶಗಳಲ್ಲಿ ಕಂಟೈನ್ಮೆಂಟ್ ಕ್ರಮಗಳನ್ನು ಸಬಲಗೊಳಿಸಲು ಕ್ರಮ ತೆಗೆದುಕೊಳ್ಳಲಿದೆ. ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾದ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸುವುದರಿಂದ ಜನರಿಗೆ ತೊಂದರೆ ಉಂಟಾಗುತ್ತದೆ ಎಂದು ಅಭಿಪ್ರಾಯಿಸಲಾಯಿತು. ಕೆಲವು ಪ್ರದೇಶಗಳಲ್ಲಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದರಿಂದ ಇಂತಹ ಪ್ರದೇಶಗಳಲ್ಲಿ ಪರೀಕ್ಷೆ ಹಾಗೂ ನಿಯಂತ್ರಣ ಕ್ರಮಗಳನ್ನು ಹೆಚ್ಚಿಸಲು ಸಂಪುಟ ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News