×
Ad

ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆ: ಆನ್‌ಲೈನ್ ತರಬೇತಿ

Update: 2020-07-28 17:56 IST

ಉಡುಪಿ, ಜು.28: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಮುಂದಿನ ದಿನಗಳಲ್ಲಿ ಒಂಭತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್‌ಲೈನ್‌ನಲ್ಲಿ ನೀಡಲು ಉದ್ದೇಶಿಸಿದೆ.

ಇದರಲ್ಲಿ ಪಾಲ್ಗೊಳ್ಳಲು ಆಸಕ್ತರು ಆಗಸ್ಟ್ 8ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮು ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News