12 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2020-07-28 13:19 GMT

ಬೆಂಗಳೂರು, ಜು. 28: ಆಡಳಿತದ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಓ)ಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನಿಯೋಜಿಸಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ಕೃಷಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಾಜಕುಮಾರ್ ಕತ್ರಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾ ದೇವಿ ಸೇರಿದಂತೆ ಒಟ್ಟು 12 ಮಂದಿ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆ ಮಾಡಿ ವರ್ಗಾವಣೆ ಮಾಡಲಾಗಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಕತ್ರಿ ಅವರಿಗೆ ಕಾರ್ಮಿಕ ಇಲಾಖೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾ ದೇವಿ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪೊನ್ನಮಾಳ್ ಸುನೀಲ್ ಕುಮಾರ್-ವಿಜಯಪುರ ಜಿಲ್ಲಾಧಿಕಾರಿ, ಎಚ್.ವಿ.ದರ್ಶನ್- ಬೆಳಗಾವಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಎಚ್.ಎನ್.ಗೋಪಾಲಕೃಷ್ಣ-ಮೈಶುಗರ್ ನಿರ್ದೇಶಕರು, ಕವಿತಾ ಎಸ್.ಮಣ್ಣಿಕೇರಿ- ಚಿತ್ರದುರ್ಗ ಜಿಲ್ಲಾಧಿಕಾರಿ, ವೈ.ಎಸ್.ಪಾಟೀಲ್-ಮೈಸೂರು ಆಡಳಿತಾತ್ಮಕ ಸಂಸ್ಥೆ ಜಂಟಿ ನಿರ್ದೇಶಕರು.

ಮನೋಜ್ ಜೈನ್- ಬಿಬಿಎಂಪಿ ವಿಶೇಷ ಆಯುಕ್ತ(ಯೋಜನೆ), ಪಿ.ರಾಜೇಂದ್ರ ಚೋಳನ್- ಬಿಬಿಎಂಪಿ ವಿಶೇಷ ಆಯುಕ್ತ(ಹಣಕಾಸು ಐಟಿ), ವಿನೋತ್ ಪ್ರಿಯಾ- ಎಂಎಸ್‍ಎಂಇ ನಿರ್ದೇಶಕರು, ಬಿ.ಆರ್.ಮಮತಾ-ಸಕಾಲ ಮಿಷನ್ ಹೆಚ್ಚುವರಿ ನಿರ್ದೇಶಕರು, ಸಿಂಧು ಬಿ.ರೂಪೇಶ್- ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಿ ಸರಕಾರ ಆದೇಶ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News