ಸುಳ್ಯ: ಅಪ್ರಾಪ್ತೆಯ ಅತ್ಯಾಚಾರ ಆರೋಪ; ಓರ್ವನ ಬಂಧನ

Update: 2020-07-28 17:55 GMT

ಸುಳ್ಯ ,ಜು28: ಪಕ್ಕದ ಮನೆಯ ಅಪ್ರಾಪ್ತೆಯನ್ನು ಪುಸಲಾಯಿಸಿ ಕಳೆದ ನಾಲ್ಕು ತಿಂಗಳಿನಿಂದ ತನ್ನ ಮನೆಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಾರೆ ದರ್ಖಾಸು ನಿವಾಸಿ ಸೆಲ್ವ ಕುಮಾರ್ (50) ಬಂಧಿತ ಆರೋಪಿ. ಮನೆ ಸಮೀಪದ ಅಪ್ರಾಪ್ತೆಯನ್ನು ಪುಸಲಾಯಿಸಿ ತನ್ನ ಮನೆಯಲ್ಲಿ ನಾಲ್ಕು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಮಂಗಳವಾರ ನಡೆದ ಘಟನೆಯನ್ನು ಅಪ್ರಾಪ್ತೆ  ಹೆತ್ತವರಲ್ಲಿ ತಿಳಿಸಿದ್ದು, ಹೆತ್ತವರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಅದರಂತೆ  ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಆರೋಪಿ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News