ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

Update: 2020-07-28 18:27 GMT

ಬೆಂಗಳೂರು, ಜು.28: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ.

ಸರಕಾರಿ ಪರ ವಕೀಲರು ವಾದಿಸಿ, ಅಪ್ರಾಪ್ತರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಜಾರಿಗೊಳಿಸಲಾಗಿದೆ. ಈ ಕಾಯ್ದೆಯಡಿಯಲ್ಲಿ ಆರೋಪಿಗೆ ಜಾಮೀನು ಮಂಜೂರು ಮಾಡಲು ಬರುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಆರೋಪಿ ವಿರುದ್ಧ ಪ್ರಕರಣ ದಾಖಲಾದ ಮೇಲೆ ಯಾಕೆ ದೂರುದಾರರಿಂದ ಹಾಗೂ ಎಫ್‍ಐಆರ್‍ನಲ್ಲಿ ಉಲ್ಲೇಖಿಸಲಾದ ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಂಡಿಲ್ಲ ಎಂದು ನ್ಯಾಯಪೀಠವು ಸರಕಾರಿ ಪರ ವಕೀಲರನ್ನು ಪ್ರಶ್ನಿಸಿತು.

ಶಿಕ್ಷಕ ಕರ್ತವ್ಯದಲ್ಲಿ ಮುಂದುವರಿದಿದ್ದು, ಅವರನ್ನು ಇನ್ನೂ ಬಂಧಿಸಿಲ್ಲ. ಹೀಗಾಗಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದರಿಂದ ತನಿಖೆಗೆ ಅಡ್ಡಿ ಆಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News