×
Ad

ಮುಂದಿನ ಸಿಎಂ ಎಂಬ ವದಂತಿ: ಸ್ಪಷ್ಟನೆ ನೀಡಿದ ಲಕ್ಷ್ಮಣ್ ಸವದಿ

Update: 2020-07-29 14:52 IST

ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಪ್ರಯತ್ನಗಳು ನಡೆಯುತ್ತಿದ್ದು, ಲಕ್ಷ್ಮಣ್ ಸವದಿ ಮುಂದಿನ ಸಿಎಂ ಆಗುವ ಸಾಧ್ಯತೆ ಇದೆ ಎನ್ನುವ ಮಾಧ್ಯಮ ವರದಿಗಳ ಬಗ್ಗೆ ಸ್ವತಃ ಸವದಿಯವರೇ ಸ್ಪಷ್ಟನೆ ನೀಡಿದ್ದಾರೆ.

ಸವದಿಯವರು ದಿಲ್ಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲು ಹೋದ ನಂತರ ಈ ಊಹಾಪೋಹಗಳು ಸೃಷ್ಟಿಯಾಗಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಪ್ರೀತಿಯ ಹಿತೈಷಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ. ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ, ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ. ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು  ಆಧಾರ ರಹಿತ ಪೋಸ್ಟ್ ಗಳನ್ನು ಮಾಡದಿರಿ. ರಾಜಕೀಯ ವಿಪ್ಲವಗಳ ಬಗ್ಗೆ ಮಾಧ್ಯಮಗಳು ಅಪ್ರಬುದ್ಧ ವಿಶ್ಲೇಷಣೆಯಲ್ಲಿ ತೊಡಗುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿಕರ. ನಮ್ಮ ಲಕ್ಷ್ಯ ಆರೋಗ್ಯ ಕ್ರಾಂತಿಯ ಕಡೆಗೆ ಇರಬೇಕಾದ ಹೊತ್ತಿದು. ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಬಹುಬೇಗ ಒದಗಿರುವ ಮಹಾಮಾರಿಯ ಸಂಕಟದಿಂದ ಹೊರಬರಬೇಕಾಗಿರುವ ಸಮಯ. ಮಾಧ್ಯಮ ಮಿತ್ರರ ಆದ್ಯತೆಯು ಅದೇ ಆಗಿರಲಿ ಎಂಬ ಆಶಯ” ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News